ಕರಾವಳಿ ಫ್ರೆಂಡ್ಸ್ 60 ಗಜಗಳ ಕೆ.ಪಿ.ಎಲ್ – 2026 ಕ್ರಿಕೆಟ್ ಪಂದ್ಯಾಟ, ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟತಟ್ಟುವಿನ ಕರಾವಳಿ ಫ್ರೆಂಡ್ಸ್ ಆಶ್ರಯದಲ್ಲಿ ಐದನೇ ಬಾರಿಗೆ ಲೀಗ್ ಮಾದರಿಯ 60ಗಜಗಳ ಕ್ರಿಕೆಟ್ ಪಂದ್ಯಾಕೂಟ ಕೆ.ಪಿ.ಎಲ್ 2026 ಕರಾವಳಿ ಮೈದಾನ ಕೋಟತಟ್ಟು ಇಲ್ಲಿ ಆಯೋಜಿಸಿತು.

ಪಂದ್ಯಾಕೂಟದ ಸಭಾ ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ರಕ್ತದಾನಿ ದಿನೇಶ್ ಕಾಂಚನ್ ಬೆಟ್ಟಿನಮನೆ ಬಾರಿಕೆರೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅದೇ ರೀತಿ ಶೈಕ್ಷಣಿಕ ಸಾಧಕರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ ಮಾಜಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ, ಕೋಟತಟ್ಟು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಬಾರಿಕೆರೆ,ಕೃಷಿಕ ರವೀಂದ್ರ ಐತಾಳ್, ಕೋಟ ಸಿ ಎ ಬ್ಯಾಂಕ್ ನಿರ್ದೇಶಕ ರಂಜೀತ್ ಬಾರಿಕೆರೆ,ಸಾಲಿಗ್ರಾಮ ಪಟ್ಟಣಪಂಚಾಯತ್ ಮಾಜಿ ಸದಸ್ಯ ಮಹಾಬಲ ಮಡಿವಾಳ,ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ,ಕರಾವಳಿ ಫ್ರೆಂಡ್ಸ್ ನ ಸಂತೋಷ್ ಉಪಸ್ಥಿತರಿದ್ದರು. ರವಿ ಬನ್ನಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಂಘಟಕರಾದ ರೋಹಿತ್ ಸಹಕರಿಸಿದರು.