ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಭಾರತೀಯ ಸೇನೆ / ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪ Çರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, 2006ರ ಏಪ್ರಿಲ್ 27 ರಿಂದ 2009 ರ ಏಪ್ರಿಲ್ 27 ರ ಅವಧಿಯಲ್ಲಿ ಜನಿಸಿರುವ ಅರ್ಹ ಅಭ್ಯರ್ಥಿಗಳಿಂದ (ಬಾಲಕರು ಮಾತ್ರ) ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 13 ರ ವರೆಗೆ ವಿಸ್ತರಿಸಲಾಗಿದೆ.
ತರಬೇತಿಯು ಬ್ರಹ್ಮಾವರ ತಾಲೂಕು ಬಾರ್ಕೂರು ಹನೆಹಳ್ಳಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ರ್ಯಾಲಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574881, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಥವಾ ವೆಬ್ಸೈಟ್ https://udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
