ಎಸ್ಎಸ್ಎಲ್‌ಸಿ ಫಲಿತಾಂಶ: ರಾಜ್ಯ ಮಟ್ಟ ರ್ಯಾಂಕ್‌ ಗಳಿಸಿ ಸಂಚಲನ ಮೂಡಿಸಿದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್


ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2025-2026ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಣೇಶ್ ಮೊಗವೀರರ ನೇತ್ರತ್ವದ ಹೊಸ ಆಡಳಿತ ಮಂಡಳಿಯ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಪರಿಪೂರ್ಣ ಪ್ರಥಮ ಬ್ಯಾಚ್‌ನ ವಿದ್ಯಾರ್ಥಿಗಳು ರಾಜ್ಯ ಮಟ್ಟ ರ್ಯಾಂಕ್ ಹಾಗೂ 100% ಫಲಿತಾಂಶದೊಂದಿಗೆ ಬೈಂದೂರು ತಾಲ್ಲೂಕಿನಲ್ಲೇ ಪ್ರಶಂಸೆಗೆ ಪಾತ್ರವಾಗಿದೆ. 

ವಿದ್ಯಾರ್ಥಿಗಳಾದ ಸಮೃದ್ಧಿ ಸಿ. ಖಾರ್ವಿ(616/625)  ಹಾಗೂ ಪಂಚಮಿ (616/625) ಅಂಕ ಗಳಿಸಿ ರಾಜ್ಯಮಟ್ಟದಲ್ಲಿ 10ನೇ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. 

ಪರೀಕ್ಷೆಗೆ ಹಾಜರಾದ 68 ವಿದ್ಯಾರ್ಥಿಗಳಲ್ಲಿ ಹಾಗೆಯೇ 25 ವಿದ್ಯಾರ್ಥಿಗಳು  ವಿಶೇಷ ಶ್ರೇಣಿ, 41 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿರುತ್ತಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ ಮೊಗವೀರರು ಹಾಗೂ ಕಾರ್ಯದರ್ಶಿಯಾಗಿರುವ ಶ್ಯಾಮಲಾ ಗಣೇಶ್ ಮೋಗವೀರರು ಮತ್ತು ಬೋಧಕ, ಬೋಧಕೇತರ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.