ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶೇ.100 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ, 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 261 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೆರ್ಗಡೆ ಹೊಂದಿ ಶೇ.100 ಫಲಿತಾಂಶ ದಾಖಲಿಸಿರುತ್ತಾರೆ. 

ಅನ್ವರ್ಥ ಪೂಜಾರಿ 624 ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ , ಪ್ರಾರ್ಥನಾ ಜಿ., ಸಾತ್ವಿಕ್ ಎಸ್. ಭಟ್ ಹಾಗೂ ತಕ್ಷಾ ಪಿ. ಶೆಟ್ಟಿ ರಾಜ್ಯ ಮಟ್ಟದಲ್ಲಿ 623 ಅಂಕ ಪಡೆದು 2ನೇ ಸ್ಥಾನ ಗಳಿಸಿರುತ್ತಾರೆ. ರಾಜ್ಯಮಟ್ಟದಲ್ಲಿ 3ನೇ ಸ್ಥಾನ ಮತ್ತು ಅವನಿಕಾ ಜಿ. 620 ಅಂಕಗಳಿಸಿ ತೃತೀಯ ಸ್ಥಾನ ಮತ್ತು ರಾಜ್ಯ ಮಟ್ಟದಲ್ಲಿ ಆರನೇ ಸ್ಥಾನ ಗಳಿಸಿರುತ್ತಾರೆ.

261 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 56 ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 137 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ, 81 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 39 ವಿದ್ಯಾರ್ಥಿಗಳು B+, 3 ವಿದ್ಯಾರ್ಥಿಗಳು B ಹಾಗೂ ಓರ್ವ ವಿದ್ಯಾರ್ಥಿ C+ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಪಡೆದಿರುತ್ತಾರೆ.