ಮದರ್ ತೆರೇಸಾ ಪಿಯು ಕಾಲೇಜಿನಲ್ಲಿ ಅಮಾಸೆಬೈಲು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ರ್ಯಾಂಕ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿದ  ವಿದ್ಯಾರ್ಥಿಗಳು, ನಂತರ ಪಿಯುಸಿ ವಿದ್ಯಾಭ್ಯಾಸಕ್ಕೆ ಮದರ್ ತೆರೆಸಾ ಪದವಿ ಪೂರ್ವ ಕಾಲೇಜನ್ನು ಆಯ್ಕೆ ಮಾಡಿಕೊಂಡು, ದ್ವಿತೀಯ ಪಿಯುಸಿಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

2025–26ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಈ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸಿದ್ದು, , ರಿಷಿತಾ  ಮತ್ತು  ಕ್ಷಮಾ 593 ಅಂಕಗಳೊಂದಿಗೆ ರಾಜ್ಯಮಟ್ಟದಲ್ಲಿ 8ನೇರ್ಯಾಂಕ್, ಪ್ರಗತಿ 591 ಅಂಕಗಳೊಂದಿಗೆ 10ನೇ ರ್ಯಾಂಕ್, ರಾಶಿ 590 ಅಂಕಗಳೊಂದಿಗೆ 11ನೇ ರ್ಯಾಂಕ್ ಪಡೆಯುವ ಮೂಲಕ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದಿದ್ದಾರೆ. ಇವರ ಈ ಸಾಧನೆ, ಗ್ರಾಮೀಣ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳಿಗೂ ಉತ್ತಮ ಅವಕಾಶ ಮತ್ತು ಮಾರ್ಗದರ್ಶನ ದೊರೆತರೆ ಎತ್ತರದ ಸಾಧನೆ ಸಾಧ್ಯವೆಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಅಮಾವಾಸೆಬೈಲು ಸರಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದ ಈ ವಿದ್ಯಾರ್ಥಿಗಳು, ಪದವಿ ಪೂರ್ವ ಹಂತದಲ್ಲಿ ಮದರ್ ತೆರೆಸಾ ಪಿಯು ಕಾಲೇಜಿನ ಶೈಕ್ಷಣಿಕ ವಾತಾವರಣ ಮತ್ತು ಗುಣಮಟ್ಟದ ಮಾರ್ಗದರ್ಶನದಿಂದ ತಮ್ಮ ಪ್ರತಿಭೆಯನ್ನು ಇನ್ನಷ್ಟು ತೀಕ್ಷ್ಣಗೊಳಿಸಿಕೊಂಡು ಈ ಯಶಸ್ಸನ್ನು ಸಾಧಿಸಿದ್ದಾರೆ.

ಈ ಸಾಧನೆಗೆ ಎರಡು ಸಂಸ್ಥೆಗಳ ಶಿಕ್ಷಕರು, ಪೋಷಕರು ಮತ್ತು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದ್ದು, ಇತರ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.