ಉಡುಪಿ: ಮೈಸೂರಿನ ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿಶೇಷಚೇತನ ವಿದ್ಯಾರ್ಥಿ / ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.jsspda.org ಅಥವಾ ಪ್ರಾಂಶುಪಾಲರು, ಜೆ.ಎಸ್.ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಮೈಸೂರು, ಮೊ.ನಂ: 9844644937 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
