ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ


ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಕೇಂದ್ರ ಸರ್ಕಾರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಅವರು ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಿದರು.