ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕಾಲೇಜಿನ ಶ್ರೇಯೋಭಿವೃದ್ಧಿ ಹಾಗೂ ಮೌಲ್ಯಪೂರ್ಣ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರಾಕ್ತನ ವಿದ್ಯಾರ್ಥಿ ಸಂಘದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜೊತೆಗೆ ಪ್ರಾಕ್ತನ ವಿದ್ಯಾರ್ಥಿಗಳು ಸಂಸ್ಥೆಯೊಂದಿಗೆ ನಿರಂತರ ಬಾಂಧವ್ಯವನ್ನು ಉಳಿಸಿಕೊಂಡು, ಪ್ರಸಕ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ ಕಾರ್ಯವೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿನಿಯರಾದ ಶ್ರೇಯಾ, ಸುಹಾನಿ, ನಿಖಿತಾ ಹಾಗೂ ಶ್ರದ್ಧಾ ಆರ್. ಅವರನ್ನು ಪ್ರಾಕ್ತನ ವಿದ್ಯಾರ್ಥಿ ಸಂಘದಿAದ ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ದೀಪಾ ಪೂಜಾರಿ ಅವರು ಸಂಘದ ವಾರ್ಷಿಕ ಚಟುವಟಿಕೆಗಳ ವರದಿಯನ್ನು ವಾಚಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯೋಗೀಶ್ ಶ್ಯಾನುಭೋಗ್ ಹಾಗೂ ಖಜಾಂಚಿಯಾದ ಸಚಿನ್ ದೇವಾಡಿಗ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಪ್ರಾಕ್ತನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪ್ರಾಕ್ತನ ವಿದ್ಯಾರ್ಥಿ ಸಂಘದ ಸದಸ್ಯರಾದ ಪ್ರೀತಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
