ಉಡುಪಿ: ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ: ಉಡುಪಿ ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ ಉತ್ತೀರ್ಣರಾದ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ವೃತ್ತಿಪರ ತರಬೇತಿಗಳಾದ ಬಿ.ಎ, ಬಿ.ಎಸ್.ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ, ಬಿ.ಸಿ.ಎ, ಇತರ ಪದವಿ, ಬಿ.ಎಡ್, ಬಿಪಿಎಡ್, ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಎಸ್.ಡಬ್ಲ್ಯೂ, ಎಂ.ಬಿ.ಎ, ಎಂ.ಎಡಿ, ಎಂ.ಪಿ.ಐಡಿ, ಜೆ.ಇ, ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಎಂ.ಟೆಕ್, ಎಂ.ಇ, ಎಂ.ಡಿ, ಎಂ.ಎಸ್ ಇತರ ಯಾವುದೇ ಸ್ನಾತಕೋತ್ತರ ಪದವಿ ವಿದಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಸಲುವಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮೇ.11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.