ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನಯಾನದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘ ಹಾಗೂ ವಾಣಿಜ್ಯ ವಿಭಾಗದ ಜಂಟಿ ಆಶ್ರಯದಲ್ಲಿ ಪ್ರಾಕ್ತನ ವಿದ್ಯಾರ್ಥಿಗಳು ಹಾಗೂ ಪ್ರಸಕ್ತ ವಿದ್ಯಾರ್ಥಿಗಳ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ "ಪ್ರಾಕ್ತನಯಾನ" ಮುಖ್ಯ ಶೀರ್ಷಿಕೆಡಿಯಲ್ಲಿ ಉಪನ್ಯಾಸ ಮಾಲಿಕೆ 3 ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ AECOM Global Pvt. Ltd. ಸಂಸ್ಥೆಯಲ್ಲಿ Senior Specialist in Finance ಆಗಿರುವ ದೇವರಾಜ ಪೂಜಾರಿ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ವೃತ್ತಿ ಬದುಕಿಗೆ ಅಗತ್ಯವಾದ ಕೌಶಲ್ಯಗಳು, ಉದ್ಯೋಗ ಕ್ಷೇತ್ರದ ಅವಕಾಶಗಳು ಹಾಗೂ ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನ, ಸಮಸ್ಯೆ ಪರಿಹಾರ ಸಾಮರ್ಥ್ಯ ಹಾಗೂ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಿದರು.  

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಯೋಗೀಶ್ ಶಾನುಭೋಗ್, ಕಾರ್ಯದರ್ಶಿ ದೀಪ ಪೂಜಾರಿ, ಕ್ರೀಡಾ ಕಾರ್ಯದರ್ಶಿ ದರ್ಶನ್ ಉಪಸ್ಥಿತರಿದ್ದರು. ಪ್ರಾಕ್ತನ ವಿದ್ಯಾರ್ಥಿ ಸಂಘದ ಸದಸ್ಯರಾದ ಪ್ರೀತಿ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.