ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಎಂ.ಐ.ಟಿ ಸಾವಿಷ್ಕರ್-2026 ಎರಡನೇ ದಿನದ ಸಂಜೆಯ ಕಾರ್ಯಕ್ರಮದಲ್ಲಿ ಖ್ಯಾತ ಅಂತರಾಷ್ಟ್ರೀಯ ಮಟ್ಟದ ಸಂಗೀತ ನಿರ್ದೇಶಕರಾದ ರವಿ ಬಸ್ರೂರು ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಐಎಂಜೆ ವಿದ್ಯಾಸಂಸ್ಥೆಗಳ ಚೇರ್ಮನ್ರಾದ ಸಿದ್ಧಾರ್ಥ ಜೆ. ಶೆಟ್ಟಿ, ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಹಾಗೂ ಎಂಐಟಿ ಕುಂದಾಪುರದ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
