ಅವರು ಪಾಂಡೇಶ್ವರ ಪಂಚಾಯತ್ ಸಭಾಂಗಣದಲ್ಲಿ ಪಾಂಡೇಶ್ವರ ಗ್ರಾಮ ಪಂಚಾಯತ್, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ ಇವರ ಆಶ್ರಯದಲ್ಲಿ ಮೇ.4ರಿಂದ 11ರ ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪ್ರಸ್ತುತ ಪಾಂಡೇಶ್ವರ ಪಂಚಾಯತ್ನಲ್ಲಿ ಆಯೋಜಿಸಿರುವ ಬೇಸಿಗೆ ಶಿಬಿರಗಳ ಮಕ್ಕಳ ಕೌಶಲ್ಯಾಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಲಿದ್ದು ಪೋಷಕರು ಮಕ್ಕಳಿಗೆ ಸಂಸ್ಕಾರಯುತ ಮಾಹಿತಿಯನ್ನು ಆಗಾಗ ನೀಡಬೇಕಿದೆ, ಭಾರತೀಯ ಹಿಂದೂ ಪರಂಪರೆಯಲ್ಲಿ ತನ್ನದೆ ಆದ ವ್ಯಕ್ತಿತ್ವ ರೂಪಿಸಲು ಬೇಕಾದ ಮಾಹಿತಿಗಳನ್ನು ಗುರುಪರಂಪರೆ, ಆಚಾರ ವಿಚಾರಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿ ನರೇಂದ್ರ ಕುಮಾರ್ ಕೋಟ ಭಾಗಯಾಗಿ ಮಕ್ಕಳ ಸ್ಕೀಲ್ ಡವಲಪ್ ಸೇರಿದಂತೆ ಅನೇಕ ವಿಚಾರಗಳನ್ನು ತಿಳಿಸಿದರು.
ಈ ವೇಳೆ ಎಂಟು ದಿನಗಳ ಕಾಲ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗಿಯಾದ ಕಸಾಪ ತಾಲೂಕು ಅಧ್ಯಕ್ಷ ಜಿ.ರಾಮಚಂದ್ರ ಐತಾಳ್,ಶಿಕ್ಷಕಿ ನಾಗರತ್ನ ಹೇರ್ಳೆ ,ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮಿ ಕೋಟತಟ್ಟು ಇವರುಗಳನ್ನು ಗೌರವಿಸಲಾಯಿತು.
ಶಿಬಿರದಲ್ಲಿ ನಾಲ್ಕು ತಂಡಗಳ ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಎರಡು ತಂಡಗಳಿಗೆ ಬಹುಮಾನವನ್ನು ನೀಡಲಾಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಪಾಂಡೇಶ್ವರ ಗ್ರಾಮಪಂಚಾಯತ್ ಪಿಡಿಓ ವಂದನಾ ವಹಿಸಿದರು.
ಉಷಾ ಗಣೇಶ್ ಪೂಜಾರಿ ಸ್ವಾಗತಿಸಿ ನಿರೂಪಿಸಿದರೆ,ಗ್ರಂಥಪಾಲಕಿ ಜ್ಯೋತಿ ಪೂಜಾರಿ ಕಾರ್ಯಕ್ರಮಕ್ಕೆ ಸಹಕರಿಸಿ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ಉಲ್ಲೇಖಿಸಿ ಕೃತಜ್ಞತೆಗಳನ್ನು ಸಲ್ಲಿಸಿ ವಂದಿಸಿದರು.
