ಕೋಟ: ಕಾರ್ಮಿಕ ದಿನಾಚರಣೆ ಅಂಗವಾಗಿ ಕೂಲಿನಾಲಿ ಮಾಡಿ ಅಶಕ್ತರಿಗೆ ಅನಾರೋಗ್ಯ ಪೀಡಿತರಿಗೆ ನೆರವು ನೀಡುವ ಹರ್ತಟ್ಟು ಮಂಜುನಾಥ ಪೂಜಾರಿ ಕೋಟದ ಪಂಚವರ್ಣ ಕಛೇರಿಯಲ್ಲಿ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿರುವಾಗ ಕೆಳಗೆ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಸಾಲಿಗ್ರಾಮದ ಸುರೇಶ್ ಮರಕಾಲ ಇವರಿಗೆ ಆರ್ಥಿಕ ಸಹಾಯಹಸ್ತ ಚಾಚಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾನವಹಕ್ಕು ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಗಾಣಿಗ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ, ಇಂಡಿಕಾ ಕಲಾ ಬಳಗದ ಪ್ರಭಾಕರ್ ಮಣೂರು ಉಪಸ್ಥಿತರಿದ್ದರು.
