ಬೈಂದೂರು, ಮೇ.09: ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೈಂದೂರು ತಾಲ್ಲೂಕು, ಉಡುಪಿ ಜಿಲ್ಲೆ ವತಿಯಿಂದ ಬೈಂದೂರಿನಲ್ಲಿ ಆಯೋಜಿಸಲಾದ ನೂತನ ಕಛೇರಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಕಛೇರಿಯನ್ನು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರಿ ನೌಕರರ ಸಂಘದ ಕಾರ್ಯಚಟುವಟಿಕೆಗಳು ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಹಾರೈಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾದ ಪುರಸ್ಕಾರ ಕಾರ್ಯಕ್ರಮವನ್ನು ಶ್ಲಾಘಿಸಿದರು.
ಕಾರ್ಯಕ್ರಮಕ್ಕೆ ಶುಭ ಹಾರೈಸಿದ ಅವರು ಸಂಘದ ಮುಂದಿನ ಕಾರ್ಯಗಳಿಗೆ ಯಶಸ್ಸು ಕೋರಿ ಅಭಿನಂದನೆ ಸಲ್ಲಿಸಿದರು.
